ಮಣಿಪಾಲ: ಬೀದಿ ನಾಯಿಗಳ ದಾಳಿ – 6 ವರ್ಷದ ಬಾಲಕಿ ಗಂಭೀರ ಗಾಯ

ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

admin
admin
for illustration purposes | BBC

ಮಣಿಪಾಲ, ಅ 24: ಇಲ್ಲಿನ ಸ್ಥಳೀಯ ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಆ. 24ರ ಬುಧವಾರ ನಡೆದಿದೆ.

ನಾಯಿಗಳ ದಾಳಿಯಿಂದ ಬಾಲಕಿಯ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿಷಯ ತಿಳಿದು ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ನ್ಯಾಯಾಧೀಶೆ ಶರ್ಮಿಳಾ ಎಸ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ.

“ಇತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ನಗರದಲ್ಲಿ ಬಹಳವಾಗಿ ಹೆಚ್ಚಳ ಕಂಡಿದೆ. ಹಿರಿಯ ನಾಗರಿಕರು, ಚಿಕ್ಕಮಕ್ಕಳು, ಶಾಲಾ ವಿದ್ಯಾರ್ಥಿಗಳ ತಿರುಗಾಟಕ್ಕೂ ಭೀತಿ ಎದುರಾಗಿದೆ. ಸಾರ್ವಜನಿಕರ ಮೇಲೆ ದಾಳಿ ನಡೆಸಿರುವ ಪ್ರಕರಣಗಳು ಬಹಳಷ್ಟು ನಡೆದಿವೆ. ಸಮಸ್ಯೆಯ ಮುಕ್ತಿಗಾಗಿ ನಗರಸಭೆ ತಕ್ಷಣವಾಗಿ ನಗರದಲ್ಲಿ ನೆಲೆ ಕಂಡಿರುವ ನೂರಾರು ಬೀದಿ ನಾಯಿಗಳನ್ನು ಸೆರೆ ಹಿಡಿದು, ಶ್ವಾನ ಪುರ್ನವಸತಿ ಕೇಂದ್ರಗಳಲ್ಲಿ ದಾಖಲಿಸುವಂತೆ” ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ

- Advertisement -

- Advertisement -
TAGGED:
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!