ಕುಂದಾಪುರ: ಪತ್ನಿಯನ್ನು ಹತ್ಯೆಗೈದು , ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ .

News Desk
News Desk

ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು ಸೋಮವಾರ ಬೆಳಕಿಗೆ ಬಂದಿದೆ.

ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ .ಪೂರ್ಣಿಮಾ ಅವರನ್ನು ರವಿ ಆಚಾರ್ಯ ಅವರಿಗೆ ಕಳೆದ ಹದಿನಾರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಟಿಪ್ಪರ್‌ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ದಾಡಿಯಲ್ಲಿ ಟಿಪ್ಪರ್‌ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು.

ವಿಪರೀತ ಕುಡಿತದ ಚಟ ಹೊಂದಿರುವ ರವಿ ಕುಡಿದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

ಸೀಮಂತ ಕಾರ್ಯಕ್ರಮಕ್ಕೆ ತೆರಳಿದ್ದ ಪೂರ್ಣಿಮಾ ಅವರನ್ನು ಪತಿ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದು,ಹೀಗಾಗಿ ಪೂರ್ಣಿಮಾ ಕಾರ್ಯಕ್ರಮ ಮುಗಿದ ಬಳಿಕ ಪತಿ ನೆಲೆಸಿದ್ದ ಬಾಡಿಗೆ ಮನೆಗೆ ತೆರಳಿ ಈ ಬಗ್ಗೆ ತಮ್ಮ ತಾಯಿಗೆಮಾಹಿತಿ ನೀಡಿದ್ದರು. ರಾತ್ರಿ ಪತಿ ಪತ್ನಿ ಮಧ್ಯೆ ಜಗಳವಾಗಿ ಈ ದುರಂತ ನಡೆದಿರುವ ಸಾಧ್ಯತೆ ಇರಬಹುದೆಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

ಭಾನುವಾರ ರಾತ್ರಿಯಿಂದ ಸೊರಬದಲ್ಲಿ ನೆಲೆಸಿರುವ ಮಕ್ಕಳು ತಾಯಿಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಅನುಮಾನಗೊಂಡ ಪೂರ್ಣಿಮಾ ಅವರ ತಾಯಿ ಹೆಮ್ಮಾಡಿಯಲ್ಲಿರುವತಮ್ಮ ಸಂಬಂಧಿಕರಿಗೆ ಕರೆ ಮಾಡಿ ಮನೆಗೆ ಹೋಗಿ ನೋಡಿ ಬರುವಂತೆ ತಿಳಿಸಿದ್ದರು. ಸಂಬಂಧಿಕರು ರಾತ್ರಿ ಹೋಗಿ ನೋಡಿದಾಗ ಲೈಟ್‌ ಆಫ್‌ ಇದ್ದ ಕಾರಣ ಮಲಗಿರಬಹುದು ಎಂದು ಅಂದಾಜಿಸಿ ವಾಪಾಸಾಗಿದ್ದರು.

ಆದರೆ ಬೆಳಿಗ್ಗೆಯೂ ಕರೆ ಸ್ವೀಕರಿಸದ ಹಿನ್ನೆಲೆ ಮತ್ತೆ ಹೋಗಿ ನೋಡಿದಾಗ ಬಾಗಿಲು ಲಾಕ್‌ ಆಗಿತ್ತು. ಅನುಮಾನಗೊಂಡು ಕಿಟಕಿಯಿಂದ ನೋಡಿದಾಗ ಪೂರ್ಣಿಮಾ ರಕ್ತದ ಮಡುವಿನಲ್ಲಿಬಿದ್ದಿದ್ದರು.ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಟಿ ಶ್ರೀಕಾಂತ್‌ ಕೆ, ಸಿಪಿಐ ಗೋಪಿಕೃಷ್ಣ, ಠಾಣಾಧಿಕಾರಿ ಪವನ್‌ ನಾಯ್ಕ್‌ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

- Advertisement -
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!