ದ.ಕ. : ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ – ಹೊಸ ರೂಲ್ಸ್ ಜಾರಿ

ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ಉಳಿದವರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ.

News Desk
News Desk

ಮಂಗಳೂರು, ಆ 04: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ,  ಮೂವರು ಯುವಕರ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಸಂಚರಿಸಿಲು ನಿರ್ಬಂಧ ವಿಧಿಸಿ  ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ.

ಮಂಗಳೂರಿನ ಕಮಿಷನರ್‌ ಕಚೇರಿಯಲ್ಲಿ ದ.ಕ, ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ನಗರ ಕಮಿಷನರ್‌ ವ್ಯಾಪ್ತಿಯ ಪೊಲೀಸ್‌ ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಹಾಕಿರುವ ನಿರ್ಬಂಧಗಳನ್ನು ಹಂತಹಂತವಾಗಿ ತೆರವು ಮಾಡಲಾಗುವುದು .

ಇದರೊಂದಿಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರು ಸಂಚರಿಸುವಂತಿಲ್ಲ ಎಂದು ಹೇಳಿದ್ದಾರೆ .

ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ಉಳಿದವರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ.

- Advertisement -

ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದ ಹಿನ್ನಲೆ ಈ ಕ್ರಮ ಜಾರಿಗೊಳಿಸಿದ್ದು ಮುಖ್ಯವಾಗಿ ಯುವಕರ ಮೇಲೆ ನಿಗಾ ಇರಿಸಲಾಗುವುದು ಎಂದು ಹೇಳಿದ್ದಾರೆ.

ಇದಲ್ಲದೆ 2015ರ ಬಳಿಕದ ಕೋಮುಗಲಭೆ ಪ್ರಕರಣಗಳನ್ನು ಪರಿಶೀಲಿಸಿ, ಅದರ ಆರೋಪಿಗಳ ಬಗ್ಗೆ ನಿಗಾ ಇರಿಸುವಂತೆ ಸೂಚಿಸಲಾಗಿದೆ. ಇದರೊಂದಿಗೆ ಜಿಲ್ಲಾ ಪೊಲೀಸ್‌ ವತಿಯಿಂದ ಗಡಿಪ್ರದೇಶಗಳಲ್ಲಿ 12 ಕಡೆ ಹಾಗೂ ನಗರ ಪೊಲೀಸ್‌ ವ್ಯಾಪ್ತಿ ಯಲ್ಲಿ 6 ಕಡೆಗಳಲ್ಲಿ ಚೆಕ್‌ಪೋಸ್ಟ್‌ ಹಾಕಲಾಗಿದೆ.

ಸಿಎಂ ಸೂಚನೆ ಮೇರೆಗೆ ಹಾಗೂ ಅಹಿತಕರ ಘಟನೆಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮುಂದಿನ ಒಂದು ವರ್ಷ ಕಾಲ ಚೆಕ್‌ಪೋಸ್ಟ್‌ಗಳು ಕಾರ್ಯವಹಿಸಲಿವೆ ಎಂದು ಮಾಹಿತಿ ನೀಡಿದರು.

- Advertisement -
TAGGED: ,
Share this Article
1 Comment

Leave a Reply

Your email address will not be published. Required fields are marked *

error: Alert: Copyrighted Content!!