ಮಂಗಳೂರು; ಇಬ್ಬರಿಗೆ ಚೂರಿ ಇರಿತ ಓರ್ವನ ಸ್ಥಿತಿ ಗಂಭೀರ – ನಗರದ ವಲಚ್ಚಿಲ್ ಎಂಬಲ್ಲಿ ಘಟನೆ

ಆಸೀಫ್ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

News Desk
News Desk

ಮಂಗಳೂರು: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ನಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್ ಎಂಬ ಬಾಲಕನ ಮೇಲೆ ಹಲ್ಲೆಗೆ ಗಾಂಜಾ ಗ್ಯಾಂಗ್ ಮುಂದಾಗಿದ್ದು, ಇದನ್ನು ತಡೆಯಲು ಯತ್ನಿಸಿದ ಆತನ ಮಾವ ಆಸೀಫ್ ಮೇಲೆ ಗಂಭೀರ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನು ಆಸೀಫ್ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮನ್ಸೂರ್ ಮತ್ತು ಆಶಿಕ್ ಎಂಬವರು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಆಶಿಕ್ ಎಂಬವನನ್ನು ಬಂಧಿಸಲಾಗಿದ್ದು, ಇವರು ಮಂಗಳೂರು ಹಾಗೂ ಆಸುಪಾಸಿನ ಕಾಲೇಜಿನ ವಿದ್ಯಾರ್ಥಿಗಳಿಗೆ ನಿರಂತರವಾಗಿ ಗಾಂಜಾ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -
- Advertisement -
TAGGED:
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!