ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಭಗವಧ್ವಜ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿರುದ್ಧ ಧ್ವಜಸಂಹಿತೆಯಡಿ ಕೇಸು ದಾಖಲಿಸಲು ಕ್ಯಾಂಪಸ್ ಫ್ರಂಟ್ ಒತ್ತಾಯ

ಬಿ.ಸಿ ನಾಗೇಶ್ ಹಾಗೂ ಎಬಿವಿಪಿ ಮುಖಂಡರ ಮೇಲೆ ಧ್ವಜಸಂಹಿತೆಯಡಿ ಕೇಸು ದಾಖಲಿಸಲು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.

News Desk
News Desk

ಬೆಂಗಳೂರು: ತಿಪಟೂರು ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ್ದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭಾಗವಹಿಸಿದ ತಿರಂಗ ಯಾತ್ರೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಭಗವಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು ಈ ಕೃತ್ಯವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ.

ತ್ರಿವರ್ಣ ಧ್ವಜದ ಮೇಲೆ ಬೇರೆ ಯಾವುದೇ ಬಾವುಟಗಳು ಹಾರಿಸುವಂತಿಲ್ಲ ಎಂಬ ಸಾಮಾನ್ಯ ಪ್ರಜ್ಞೆಯಿಲ್ಲದ ಶಿಕ್ಷಣ ಸಚಿವರು ಭಗವಧ್ವವನ್ನು ಹಾರಿಸಿರುವುದನ್ನು ನೋಡಿಯೂ ಮೌನವಹಿಸಿದ್ದು ಆರೆಸ್ಸೆಸ್ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಈ ಕೃತ್ಯವು ಧ್ವಜ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು ರಾಷ್ಟ್ರೀಯ ಗೌರವ ಅವಮಾನಗಳ ತಡೆ ಕಾಯಿದೆ 1971 ಉಲ್ಲಂಘಿಸಿದ ಹಾಗೂ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹಾಗೂ ಎಬಿವಿಪಿ ಮುಖಂಡರ ಮೇಲೆ ಧ್ವಜಸಂಹಿತೆಯಡಿ ಕೇಸು ದಾಖಲಿಸಲು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.

- Advertisement -
TAGGED:
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!