‘ಜು.26ರಂದು ಇಡಿ ವಿರುದ್ದ ಕಾಂಗ್ರೆಸ್‌‌ನಿಂದ ಮೌನ್ ಸತ್ಯಾಗ್ರಹ’ – ಡಿಕೆಶಿ

ಜುಲೈ.26ರಂದು ಬೆಂಗಳೂರಿನ ಕಾಂಗ್ರೆಸ್ ಭನದ ಗಾಂಧಿ ಪ್ರತಿಮೆ ಬಳಿಯಲ್ಲಿ ರಾಜ್ಯದ ಎಲ್ಲಾ ನಾಯಕರು ಮೌನ ಸತ್ಯಾಗ್ರಾಹ ನಡೆಸೋದಕ್ಕೆ ನಿರ್ಧರಿಸಲಾಗಿದೆ.

News Desk
News Desk

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಕಿರುಕುಳ ಖಂಡಿಸಿ ಕಾಂಗ್ರೆಸ್ ನಿಂದ ದೇಶದ್ಯಾಂತ ಪ್ರತಿಭಟನೆ ನಡೆಸಲಾಗುತ್ತಿದ್ದು, ಜುಲೈ.26ರಂದು ಬೆಂಗಳೂರಿನ ಕಾಂಗ್ರೆಸ್ ಭನದ ಗಾಂಧಿ ಪ್ರತಿಮೆ ಬಳಿಯಲ್ಲಿ ರಾಜ್ಯದ ಎಲ್ಲಾ ನಾಯಕರು ಮೌನ ಸತ್ಯಾಗ್ರಾಹ ನಡೆಸೋದಕ್ಕೆ ನಿರ್ಧರಿಸಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಇದೇ ರೀತಿ ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಆದರೂ ಕಿರುಕುಳ ನಿಲ್ಲುತ್ತಿಲ್ಲ. ಹೀಗಾಗಿ ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ರಾಜ್ಯದ ಎಲ್ಲ ನಾಯಕರು ಸೇರಿ 26 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಮೌನ ಸತ್ಯಾಗ್ರಹ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

- Advertisement -
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!